ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾಗೂ ಅವರ ಕುಟುಂಬದ ಸದಸ್ಯರ, ನಾಲ್ವರು ಸಚಿವರು, ಮೂವರು ಶಾಸಕರು ಹಾಗೂ ಇಬ್ಬರು ಅಧಿಕಾರಿಗಳು ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅವುಗಳ ದಾಖಲೆಯನ್ನು ವಾರದೊಳಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರ್ಗಿಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರವು ಜನರ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸರ್ಕಾರದ ಹರಿಹಾಯ್ದರು.
ಭ್ರಷ್ಟಾಚಾರದ ಕೆಲ ದಾಖಲಗಳು ಸಿಗಬೇಕಿದೆ. ಅದು ಅವುಗಳು ಸಿಕ್ಕ ಬಳಿಕ ಎಲ್ಲರ ಜಾತಕ ಜಾಲಾಡುತ್ತೇನೆ ಎಂದರು.
ಉತ್ತರ ಕರ್ನಾಟಕದ ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹೈಕಮಾಂಡ್ ಕೂಡ ಅದನ್ನೇ ಹೇಳಿದೆ. ಹೀಗಾಗಿ ಈ ಬಾರಿ ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸಲಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನನ್ನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಮೇಶ ಜಾರಕಿಹೊಳಿ ಹಾಗೂ ಯಾರಾದರೂ ಚುನಾವಣೆಗೆ ನಿಲ್ಲಲಿ. ನಮ್ಮ ಸಾಮರ್ಥ್ಯ ತೋರಿಸುತ್ತೇವೆ.
ಸರ್ಕಾರದ ನೀರಾವರಿ ಯೋಜನೆಗಳ ವೈಫಲ್ಯ ಖಂಡಿಸಿ ಸೆ. 20ರಂದು ಕೊಪ್ಪಳ, 23ರಂದು ವಿಜಯಪುರದಲ್ಲಿ ಹೋರಾಟ, 22ರಂದು ಬೀಳಗಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮಾವೇಶ ನಡೆಸಲಿದ್ದೇವೆ ಎಂದರು.
ನಮ್ಮ ನಡಿಗೆಗೆ ಮೋದಿ ಅವರಿಂದ ಚಾಲನೆ;
ಅ. 1ರಂದು ಬೆಂಗಳೂರಿನಲ್ಲಿ ನವ ಕರ್ನಾಟಕ ನಿರ್ಮಾಣಕ್ಕೆ ವಿಧಾನಸಭಾ ಕ್ಷೇತ್ರದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವರು ಎಂದು ಯಡಿಯೂರಪ್ಪ ತಿಳಿಸಿದರು.
ರಾಜ್ಯ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೊಲೆ, ಆತ್ಮಹತ್ಯೆ ಪ್ರಕರಣಗಳು ನಿರಂತರವಾಗಿ ಜರುಗುತ್ತಿವೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. Dysp ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ ಮುಖ್ಯಮಂತ್ರಿ ಅವರು ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆಯಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.
0 comments:
Post a Comment